by 1 on | 2025-05-11 18:07:14
Share: Facebook | Twitter | Whatsapp | Linkedin | Visits: 135
ಬಾಗಲಕೋಟೆ: ಜಿಲ್ಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ಸಹಯೋಗದಲ್ಲಿ ಪ್ರಧಾನಮಂತ್ರಿ ಕುಸುಮ ಬಿ ಮತ್ತು ಸಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ರೈತರಿಗೆ ಹಗಲು ವೇಳೆಯಲ್ಲಿ 7 ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ.
ಪ್ರಧಾನಮಂತ್ರಿ ಕುಸುಮ ಬಿ ಯೋಜನೆಯಡಿ 50 ನೀರಾವರಿ ಪಂಪಸೆಟ್‍ಗಳ ಪೈಕಿ 24 ನೀರಾವರಿ ಪಂಪಸೆಟಗಳಿಗೆ ಸೌರಶಕ್ತಿ ಚಾಲಿತ ಪಂಪಸೆಟ್ ಅಳವಡಿಸಲಾಗಿದೆ. ಉಳಿದ ಫಲಾನುಭವಿಗಳ ಕಾಮಗಾರಿ ಪ್ರಗತಿಯಲ್ಲಿದೆ. ಈ ಯೋಜನೆಯಿಂದ ರೈತರಿಗೆ ಹಗಲು ವೇಳೆ ನಿರಂತರ ವಿದ್ಯುತ್ ಪೂರೈಸಲಾಗುತ್ತಿದೆ. ಸೌರಮಿತ್ರ ಪೋರ್ಟಲ್ ಮೂಲಕ 1083 ರೈತರು ಸೋಲಾರ ಪಂಪಸೆಟ್ ಅಳವಡಿಸಿಕೊಳ್ಳಲು ನೋಂದಾಯಿಸಿಕೊಂಡಿದ್ದು, ಸ್ಥಳ ಪರಿಶೀಲನೆ ಕಾರ್ಯ ಪ್ರಗತಿಯಲ್ಲಿದೆ.
ಪ್ರಧಾನಮಂತ್ರಿ ಕುಸುಮ ಸಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 11 ವಿದ್ಯುತ್ ಉಪ ಕೇಂದ್ರಗಳ ಮೂಲಕ 28 ವಿದ್ಯುತ್ ಮಾರ್ಗಗಳನ್ನು ಸೌರೀಕರಣಗೊಳಿಸಲು ಉದ್ದೇಶಿಸಿ 55.89 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ ಹೊಂದಲಾಗಿದೆ. 2025 ಮೇ ತಿಂಗಳಲ್ಲಿ ಮೊದಲ ಬಾರಿಗೆ ಮುಧೋಳ ತಾಲೂಕಿನ ಲೋಕಾಪೂರ ಉಪವಿಭಾಗದ 110/11 ಕೆವಿ ಹಲಕಿ ವಿದ್ಯುತ್ ಉಪ ಕೇಂದ್ರದಲ್ಲಿ 11 ಕೆವಿ ಮಾರ್ಗ ಸೌರೀಕರಣಗೊಳಿಸಿ ಚಾಲನೆ ನೀಡಲಾಗುವುದು. ಅದರಿಂದ 0.52 ಮೆಗಾ ವ್ಯಾಟ್ ಉತ್ಪಾದನೆಯಾಗಲಿದ್ದು, ಹಗಲು ವೇಳೆ ನಿರಂತರ 7 ತಾಸು ನೀರಾವರಿ ಮಾರ್ಗಕ್ಕೆ ವಿದ್ಯುತ್ ಪೂರೈಸಲಾಗುತ್ತದೆ ಎಂದು ಬಾಗಲಕೋಟೆ ಹೆಸ್ಕಾಂ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಾರ ಮಧ್ಯಸ್ಥಿಕೆ ಬೇಕಿಲ್ಲ,ಪಿಓಕೆ ಮರಳಿಸಬೇಕು ಪ್ರಧಾನಿ ಮೋದಿ ಸ್ಪಷ್ಟ ಸಂದೇಶ
ಮರಳು ತುಂಬಿದ ಟಿಪ್ಪರಗೆ ಒಂದು ಜೀವ ಬಲಿ
ಹಳೆ ಬಾಗಲಕೋಟೆಯಲ್ಲಿ ಯುವಕನಿಗೆ ಚಾಕು ಇರಿತ
ಜಗತ್ತಿಗೆ ಇಂದು ಭಾರತದ ಶಕ್ತಿ ಸಾಮರ್ಥ್ಯದ ಅರಿವು:ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ
ಸರ್ಕಾರದ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು
ಹಸೆ ಮಣೆ ಏರುವ ಮೊದಲೇ ಪೆಟ್ರೋಲ್ ದಾಳಿಗೆ ಒಳಗಾದ ಯುವತಿಯ ಕರುಣಾಜನಕ ಕಥೆ ಇದು
ಮಕ್ಕಳ ಮದುವೆಗೆ ತೆಗೆದ ಸಾಲದ ಶೂಲಕ್ಕೆ ಹೆದರಿ ದಂಪತಿ ಆತ್ಮಹತ್ಯೆಗೆ ಶರಣು
ಕೈಗಾರಿಕೆ ಸ್ಥಾಪನೆಗೆ ಧೈರ್ಯ, ಪರಿಶ್ರಮ ಮುಖ್ಯ : ಡಿಸಿ ಜಾನಕಿ