by 1 on | 2025-05-22 13:07:41 Last Updated by 1 on2026-01-01 05:57:23
Share: Facebook | Twitter | Whatsapp | Linkedin | Visits: 177
ಬಾಗಲಕೋಟೆ ನಗರದಲ್ಲಿಂದು ಅಮೃತ ಭಾರತ ನಿಲ್ದಾಣ ಯೋಜನೆಯಡಿಯಲ್ಲಿ ಪುನರಾಭಿವೃದ್ಧಿಗೊಂಡ ಬಾಗಲಕೋಟೆ ನಗರದ ರೈಲು ನಿಲ್ದಾಣದ ಉದ್ಘಾಟನೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.ಹಳೆ ಬಾಗಲಕೋಟೆ ನಗರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರು ವೀಡಿಯೋ ಕಾನ್ಫರೆನ್ಸ್ ಮೂಲಕ ನಗರದ ಪುನರಾಭಿವೃದ್ಧಿಗೊಂಡ ರೈಲು ನಿಲ್ದಾಣವನ್ನು ಉದ್ಘಾಟನೆಗೊಳಿಸಿದರು.
ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ, ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ್,ಮಾಜಿ ಡಿಸಿಎಂ ಚಿತ್ರದುರ್ಗದ ಹಾಲಿ ಸಂಸದ ಗೋವಿಂದ ಕಾರಜೋಳ,ಮಾಜಿ ಸಚಿವ ಮುರಗೇಶ ನಿರಾಣಿ,ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ,ಎಂ.ಎಲ್.ಸಿ ಪಿ.ಹೆಚ್.ಪೂಜಾರ್ ಅವರು ಸೇರಿಸಂತೆ ಸ್ಥಳೀಯ ಜನಪ್ರತಿನಿಧಿಗಳು,ರೈಲ್ವೆ ಇಲಾಖೆ ಅಧಿಕಾರಿಗಳು,ವಿವಿಧ ಇಲಾಖೆಗಳು ಕಾರ್ಯಕ್ರಮದಲ್ಲಿ ಭಾಗಿಯಾದ್ರು.
ಈ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಅವರು,ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ನೆನೆಗುದಿಗೆ ಬಿದ್ದಿದ್ದ ಯೋಜನೆಗಳನ್ನು ಕೂಡ ಮೋದಿ ಸರ್ಕಾರದ ಅವಧಿಯಲ್ಲಿ ಏಳು ಲಕ್ಷ ಐವತ್ತುಸಾವಿರ ಕೋಟಿ ವೆಚ್ಚದಲ್ಲಿ ಪೂರ್ಣಗೊಳಿಸಲಾಗುತ್ತಿದೆ.ಹೊಸರೈಲು ಮಾರ್ಗಗಳ ನಿರ್ಮಾಣ ಕಾಮಗಾರಿಗಳು, ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು. ಕರ್ನಾಟಕ ರಾಜ್ಯದಲ್ಲಿನ ಆರು ರೈಲು ನಿಲ್ದಾಣಗಳು ಉದ್ಘಾಟನೆಗೊಂಡಿದ್ದು,ಅದರಲ್ಲಿ ಬಾಗಲಕೋಟೆ ನಗರದ ರೈಲು ನಿಲ್ದಾಣ ಕೂಡ ಒಂದು.ಒಟ್ಟಾರೆ ಪುನರಾಭಿವೃದ್ಧಿಗೊಂಡಿರುವ ಬಾಗಲಕೋಟೆ ನಗರದ ರೈಲು ನಿಕ್ದಾಣ ಇಂದಿನಿಂದ ಅಧಿಕೃತವಾಗಿ ಸಾರ್ವಜನಿಕರ ಸೇವೆಗೆ ಸಮರ್ಪಣೆಗೊಂಡಿದೆ.
ಯಾರ ಮಧ್ಯಸ್ಥಿಕೆ ಬೇಕಿಲ್ಲ,ಪಿಓಕೆ ಮರಳಿಸಬೇಕು ಪ್ರಧಾನಿ ಮೋದಿ ಸ್ಪಷ್ಟ ಸಂದೇಶ
ಮರಳು ತುಂಬಿದ ಟಿಪ್ಪರಗೆ ಒಂದು ಜೀವ ಬಲಿ
ಹಳೆ ಬಾಗಲಕೋಟೆಯಲ್ಲಿ ಯುವಕನಿಗೆ ಚಾಕು ಇರಿತ
ಜಗತ್ತಿಗೆ ಇಂದು ಭಾರತದ ಶಕ್ತಿ ಸಾಮರ್ಥ್ಯದ ಅರಿವು:ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ
ಸರ್ಕಾರದ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು
ಹಸೆ ಮಣೆ ಏರುವ ಮೊದಲೇ ಪೆಟ್ರೋಲ್ ದಾಳಿಗೆ ಒಳಗಾದ ಯುವತಿಯ ಕರುಣಾಜನಕ ಕಥೆ ಇದು
ಮಕ್ಕಳ ಮದುವೆಗೆ ತೆಗೆದ ಸಾಲದ ಶೂಲಕ್ಕೆ ಹೆದರಿ ದಂಪತಿ ಆತ್ಮಹತ್ಯೆಗೆ ಶರಣು
ಕೈಗಾರಿಕೆ ಸ್ಥಾಪನೆಗೆ ಧೈರ್ಯ, ಪರಿಶ್ರಮ ಮುಖ್ಯ : ಡಿಸಿ ಜಾನಕಿ