by 1 on | 2025-07-16 12:20:16
Share: Facebook | Twitter | Whatsapp | Linkedin | Visits: 179
ಬಾಗಲಕೋಟೆ:ರಾಜ್ಯದಲ್ಲಿ ಹೃದತಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಈಗ ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಮಾಜಿ ನಗರಸಭೆ ಅಧ್ಯಕ್ಷ ಹಾಲಿ ಸದಸ್ಯ ಸಿದ್ದು ಮೀಸಿ(63) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ಬೆಳಿಗ್ಗೆ ಅವರು ಹೃದತಾಘಾತದಿಂದ ಸಾವನ್ನಪ್ಪಿದ್ದಾರೆ.ಆರೋಗ್ಯವಂತರಾಗಿದ್ದವರು ಮನೆಯಲ್ಲಿ ಏಕಾಏಕಿ ಸುಸ್ತಾದಂತೆ ಕಂಡು ಬಂದ ಹಿನ್ನೆಲೆ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಷ್ಟ ರಲ್ಲಿ ಸಾವನ್ನಪ್ಪಿದ್ದಾಗಿ ಮಾಹಿತಿ ಲಭ್ಯವಾಗಿದೆ.
ಕಾಂಗ್ರೆಸ್ ಪಕ್ಷದ ಮುಖಂಡರಾಗಿ ಜಮಖಂಡಿ ನಗರಸಭೆಯ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದವರು.ನಾಲ್ಕು ಬಾರಿ ಸದಸ್ಯರಾಗಿ ಆಯ್ಕೆಯಾಗಿದ್ದರು.
ಏಕಾಏಕಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಸ್ಥಳೀಯರನ್ನು ದಿಗ್ಭ್ರಾಂತರನ್ನಾಗಿಸಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಸಂಜೆ ಅಂತ್ಯಸಂಸ್ಕಾರ ನೆರವೇರಲಿದೆ.
ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣಗಳು ಜನರನ್ನ ಬೆಚ್ಚಿಬೀಳಿಸಿವೆ.
ನಗರಸಭೆ ಅದ್ಯಕ್ಷ ಪರಮಾನಂದ ಗವರೋಜಿ ಪೌರಾಯುಕ್ತ ಜ್ಯೋತಿಗಿರೀಶ, ಮುಖಂಡರಾದ ಶಾಮ ಘಾಟಗೆ,ಮಾಜಿ ಶಾಸಕ ಆನಂದ ನ್ಯಾಮಗೌಡ ಅವರ ಸಹೋದರ ಬಸವರಾಜ ನ್ಯಾಮಗೌಡ,ಸೇರಿದಂತೆ ನಗರಸಭೆ ಸದಸ್ಯರು ಅಂತ್ಯಮ ದರ್ಶನ ಪಡೆದರು.
ಯಾರ ಮಧ್ಯಸ್ಥಿಕೆ ಬೇಕಿಲ್ಲ,ಪಿಓಕೆ ಮರಳಿಸಬೇಕು ಪ್ರಧಾನಿ ಮೋದಿ ಸ್ಪಷ್ಟ ಸಂದೇಶ
ಮರಳು ತುಂಬಿದ ಟಿಪ್ಪರಗೆ ಒಂದು ಜೀವ ಬಲಿ
ಹಳೆ ಬಾಗಲಕೋಟೆಯಲ್ಲಿ ಯುವಕನಿಗೆ ಚಾಕು ಇರಿತ
ಜಗತ್ತಿಗೆ ಇಂದು ಭಾರತದ ಶಕ್ತಿ ಸಾಮರ್ಥ್ಯದ ಅರಿವು:ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ
ಸರ್ಕಾರದ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು
ಹಸೆ ಮಣೆ ಏರುವ ಮೊದಲೇ ಪೆಟ್ರೋಲ್ ದಾಳಿಗೆ ಒಳಗಾದ ಯುವತಿಯ ಕರುಣಾಜನಕ ಕಥೆ ಇದು
ಮಕ್ಕಳ ಮದುವೆಗೆ ತೆಗೆದ ಸಾಲದ ಶೂಲಕ್ಕೆ ಹೆದರಿ ದಂಪತಿ ಆತ್ಮಹತ್ಯೆಗೆ ಶರಣು
ಕೈಗಾರಿಕೆ ಸ್ಥಾಪನೆಗೆ ಧೈರ್ಯ, ಪರಿಶ್ರಮ ಮುಖ್ಯ : ಡಿಸಿ ಜಾನಕಿ