by 1 on | 2024-10-13 19:30:15
Share: Facebook | Twitter | Whatsapp | Linkedin | Visits: 995
ಬನಹಟ್ಟಿ:ಕೆ.ಹೆಚ್.ಡಿ.ಸಿ ನಿಗಮದ ನೂರಾರು ಹಗರಣದ ಮರು ತನಿಖೆಗೆ ಒತ್ತಾಯಿಸಿ ಹಾಗೂ ನೇಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದಿಂದ ಪಾದಯಾತ್ರೆ ಆರಂಭಗೊಂಡಿದೆ.ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ ಟರ್ಕಿ ಅವರ ನೇತೃತ್ವದಲ್ಲಿ ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯಿಂದ ಹುಬ್ಬಳ್ಳಿ ವರೆಗೆ ಬೃಹತ್ ಪಾದಯಾತ್ರೆ ಜರುಗಲಿದೆ. ಪಾದಯಾತ್ರೆಯು ಸಂಜೆ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಮಾರ್ಗವಾಗಿ ಮೂಡಲಗಿ ಪಟ್ಟಣಕ್ಕೆ ತೆರಳಿತು.ಬನಹಟ್ಟಿ ಪಟ್ಟಣದ ನೇಕಾರ ಬಾಂಧವರು ಪಾದಯಾತ್ರಿಕರಿಗೆ ಅದ್ದೂರಿಯಾಗಿ ನೀಡಿ ಬೀಳ್ಕೊಟ್ಟರು.ಇನ್ನು ಈ ಪಾದಯಾತ್ರೆ ಬೆಳಗಾವಿ ಮಾರ್ಗವಾಗಿ ಹುಬ್ಬಳ್ಳಿ ತಲುಪಿ ಅಲ್ಲಿಂದ ನೇಕಾರರ ಬೃಹತ್ ಧರಣಿ ಆರಂಭಗೊಳ್ಳಲಿದೆ.
ಯಾರ ಮಧ್ಯಸ್ಥಿಕೆ ಬೇಕಿಲ್ಲ,ಪಿಓಕೆ ಮರಳಿಸಬೇಕು ಪ್ರಧಾನಿ ಮೋದಿ ಸ್ಪಷ್ಟ ಸಂದೇಶ
ಮರಳು ತುಂಬಿದ ಟಿಪ್ಪರಗೆ ಒಂದು ಜೀವ ಬಲಿ
ಹಳೆ ಬಾಗಲಕೋಟೆಯಲ್ಲಿ ಯುವಕನಿಗೆ ಚಾಕು ಇರಿತ
ಜಗತ್ತಿಗೆ ಇಂದು ಭಾರತದ ಶಕ್ತಿ ಸಾಮರ್ಥ್ಯದ ಅರಿವು:ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ
ಸರ್ಕಾರದ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು
ಹಸೆ ಮಣೆ ಏರುವ ಮೊದಲೇ ಪೆಟ್ರೋಲ್ ದಾಳಿಗೆ ಒಳಗಾದ ಯುವತಿಯ ಕರುಣಾಜನಕ ಕಥೆ ಇದು
ಮಕ್ಕಳ ಮದುವೆಗೆ ತೆಗೆದ ಸಾಲದ ಶೂಲಕ್ಕೆ ಹೆದರಿ ದಂಪತಿ ಆತ್ಮಹತ್ಯೆಗೆ ಶರಣು
ಕೈಗಾರಿಕೆ ಸ್ಥಾಪನೆಗೆ ಧೈರ್ಯ, ಪರಿಶ್ರಮ ಮುಖ್ಯ : ಡಿಸಿ ಜಾನಕಿ